ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮ...