ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜುಲೈ, 2016 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮಾನವ ಘನತೆಯ ಪ್ರತಿಪಾದಕ: ಬಿಜವಾಡ ವಿಲ್ಸನ್

 ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮಾಚಿ

ನಿನ್ನದು ಕಠೋರ ಮೌನ

ಅಧರಗಳಿಗೆ ಹೆಣೆದ ಕಸೂತಿ ಬಿಚ್ಚು ಹೆಪ್ಪುಗಟ್ಟಿದೆ ನಿನ್ನದು ಕಠೋರ ಮೌನ ನಿನ್ನ ಧನಿಗಾಗಿ ನಿಶಬ್ಧರಾಗಿ ಮಲಗಿದ್ದಾರೆ ಸ್ಮಶಾನದಲಿ ನಿನ್ನದು ಕಠೋರ ಮೌನ ಹಾಡು ಕುಣಿತ ಮೋಜಿನ ಮಧುಶಾಲೆಯ ಮಂಚದಲಿ ರತಿಸುಖದ ಉನ್ಮಾದಕತೆ ಕೊಳಕು ಶರಾಬಿನ ಬಟ್ಟಲಲಿ ಕೆನೆಗಟ್ಟಿದೆ ಎಳಸು ಹೃದಯದಲಿ ಬಂಧಿಯಾಗಿದೆ ಮರಿಮೀನು ಹೊರಬರಲಾಗದೆ ನಿನ್ನೆದೆಯ ಸದ್ದಿಗೆ ಕಿವಿ ನಿಮಿರಿಸಿ ಬರಗೆಟ್ಟಿದೆ ನಿನ್ನದು ಕಠೋರ ಮೌನ ಜಾತ್ರೆಯಲಿ ತೂರಿಬರುವ ಬೆಂಡು ಬತಾಸಿಗಿಂತಲೂ ಹರಿತ ಕಹಳೆ ಜಾಂಗಟೆ ಕಣ್ಣೀರು ಸುರಿಸಿ ಪಾಚಿಗಟ್ಟಿದೆ ನಿನ್ನದು ಕಠೋರ ಮೌನ ಮಾದಕ ನೀಳಕೂದಲಗಳ ಪಿಸುಗುಟ್ಟುವ ಮಾತಿಗೆ ಹಾಡಹಗಲೆ ಎದೆಸೆಟೆಸಿ ಬಳ್ಳಿಯಲ್ಲಿ ಪಾರಿಜಾತ ಹೂಗಟ್ಟಿದೆ ನಿನ್ನದು ಕಠೋರ ಮೌನ ಹುಚ್ಚಲೌಡಿ ‘ಮಿತ್ರಾ’ ಅವಳನ್ನೆಕೆ ನಿಂದಿಸುವೆ ಸುಖಾಸುಮ್ಮನೆ ಕಣ್ಣುತೆರೆದು ನೋಡು ನಿನ್ನ ಮನಸು ನೀತಿಗೆಟ್ಟಿದೆ ನಿನ್ನದು ಕಠೋರ ಮೌನ -    ಸಂಗಮೇಶ ಡಿಗ್ಗಿ 8553550012

ಸಿದ್ಧರಾಮಯ್ಯ "ಕಿಸ್ ಭಾಗ್ಯ" ತಂದರೆ ಹುಡುಗರು ಏನ್ ಡಾಂಕ್ಯುಮೆಂಟ್ ಕೋಡಬೇಕು...?

ಸಿದ್ಧರಾಮಯ್ಯ "ಕಿಸ್ ಭಾಗ್ಯ" ತಂದರೆ ಹುಡುಗರು ಏನ್ ಡಾಂಕ್ಯುಮೆಂಟ್ ಕೋಡಬೇಕು...?

ಮೊಸರು ಮಾರುವ ಹುಡುಗನ ಸೈಕಲ್ ಮತ್ತು ಪ್ಲಾಶ್‍ಬ್ಯಾಕ್ ನೆನಪು

‘ಕಾಲನ ಕೈಗೆ ದೇವರು ಸೃಷ್ಟಿ ಮಾಡಿದ ಜಗತ್ತು ಉಳಿಯುವದಿಲ್ಲವೆಂದ ಮೇಲೆ ನಾವು ಯಾವ ಲೆಕ್ಕ’ ಏಲ್ಲೋ ಓದಿದ ಅಣಿಮುತ್ತು ಮೊನ್ನೆ ದುತ್ತನೆ ಮೆದುಳಿನಲ್ಲಿ ಗುಂಗಿ ಹುಳದಂತೆ ಕಾಡತೊಡಗಿತು. ಕಾರಣವಿಷ್ಟೇ, ಎಮ್.ಎ ಮುಗಿಯುವ ಸಮಯವೂ ಹೌದು, ಅದಕ್ಕಿಂತ ಮುಖ್ಯವಾಗಿ “ಆನಂದಮಾರ್ಗ ಆಶ್ರಮ” ತೊರೆಯಬೇಕಲ್ಲ ಎನ್ನುವ ನೋವು. ಆ ನೋವಿಗೆ ಕಾರಣವಾದವನು ದಿನಾಲೂ ಗಟ್ಟಿ ಕೆನೆ ‘ಮೊಸರು ಮಾರುವ ಹುಡುಗ’ ಮತ್ತು ಆತನ ‘ಸೈಕಲ್’. ಆ ಹುಡುಗ 7ನೇ ತರಗತಿ. ಯಲ್ಲಪ್ಪ ಮನ್ಸೂರ. ಸುಮಾರು 3 ಕಿ.ಮಿ ಸೈಕಲ್ ತುಳಿದು ಮೊಸರು ಮಾರುವ ಕಾಯಕ ಮಾಡುತ್ತಾನೆ. ಅದಕ್ಕಿಂತ ಹೆಚ್ಚಾಗಿ ಮುಂಜಾನೆಯ ಎಳೆ ಬಿಸಿಲಿನಲ್ಲಿ ಮಲಗಿದ್ದ ಹಾಸಿಗೆ ಹೊದ್ದು ಮಲಗಿದ್ದ ನನಗೆ ಎಚ್ಚರಿಸುವ ಅಲರಾಂ ಬೆಲ್ ಎಂತಲೇ ಹೇಳಬಹುದು. ಅವನ ಸೈಕಲ್ ಮಾಯಲೋಕದ ಕಿನ್ನರರು ತಮ್ಮ ವಾಹನಗಳಿಗೆ ಶೃಂಗಾರ ಮಾಡಿದಂತೆ ಗಾಲಿಗಳಿಗೆ ರಿಬ್ಬನ್ ಸುತ್ತಿ, ಯುದ್ಧಕ್ಕೆ ಸಿದ್ಧನಾಗಿದ್ದೆನೆ ಎನ್ನುವ ರೀತಿ ಭಾವುಟ ತೋರಿಸಿ, ಗೆಂಡೆಗಳನ್ನು ಗಾಳಿಗೆ ಹಾರಾಡಿಸುತ್ತಾ ಗಂಟೆ ಬಾರಿಸುವ ಗತ್ತು ನನ್ನನ್ನು ಬಾಲ್ಯದ ಪ್ಲಾಶ್‍ಬ್ಯಾಕ್‍ಗೆ ಕರೆದೊಯ್ಯುವಂತೆ ಮಾಡಿತ್ತು. ತೂತು ಬಿದ್ದು ಪುಕ್ಸಟ್ಟೆ ಅಂಡು ಕಾಣಿಸುವ ದೊಗಳೆ ಚಡ್ಡಿ ಹಾಕಿಕೊಳ್ಳುತ್ತಿದ್ದ ವಯಸ್ಸಿನ ಹುಡುಗ ನಾನಾಗಿದ್ದೆ. ‘ಮೊದ ಮೊದಲು ಕೊಂಡ ಹೀರೋ ಸೈಕಲ್’ ಎಂಬತೆ ಪುಟ್ಟ ಸೈಕಲ್ ನಮ್ಮ ಮನೆಯ ಅಂಗಳವನ್ನು ಅಲಂಕರಿಸಿತ್ತು. ಇಡೀ ಊರಿಗೆ ಮೊದಲ ಸೈಕಲ್. ಊರಿನ ಜನ ಬಂದು ಅದನ್ನು ಮೈಸೂರ

ಬಾ ಮಳೆಯೆ ಬಾ....

ಮೂರುಸಂಜೆ ಸಮಯ. ಭೂಮಿಯನ್ನು ಅಪ್ಪಿ ತಬ್ಬಿಕೊಳ್ಳಲು ಮಳೆ ಹನಿಗಳು ಪೈಪೋಟಿಗೆ ಬಿದ್ದಂತೆ ತಾಮುಂದು ನಿಮುಂದು ಎಂದು ಧರಣಿಯ ಕೆನ್ನೆಗೆ ಮುತ್ತಿಕ್ಕುತ್ತವೆ. ಕಾದು ಸುಡುವ ಹಂಚಾಗಿದ್ದ ಭೂಮಿಗೆ ತಣ್ಣನೆಯ ಬಟ್ಟೆಯನ್ನು ಹೊದಿಸಿದ ಅನುಭವ. ಊರ ತುಂಬ ಪಸರಿಸಿದ ಮಣ್ಣ ಸುವಾಸನೆಗೆ ಪಾರಿಜಾತದ ಘಮವು ಸಪ್ಪೆಯಾಗಿದೆ. ಯಾವ ಸೀಮೆಯ, ಯಾವ ಊರಿನ, ಯಾವ ಕೇರಿಯ ನೀರು ಆವಿಯಾಗಿ, ಹೆಪ್ಪುಗಟ್ಟಿ, ಮೋಡವಾಗಿ ಕರಗಿ ನೀರಾಗಿ ಪರಿಚಯವಿಲ್ಲದ ಜಾಗದಲ್ಲಿ ನಾಚಿಕೆ ಪಟ್ಟುಕೊಳ್ಳದೆ ಜಂಬವಿಲ್ಲದೆ ಸುರಿಯುವ ಅಮೃತಘಳಿಗೆಗೆ ಮಣ್ಣಿನೊಳಗೆ ಅಡಗಿ ಕುಳಿತ ಬೀಜ, ಸಸಿ, ಬೇರು ಬಾಯ್ತೆರೆದು ನಿಂತಿರುತ್ತದೆ ತುದಿಗಾಲ ಮೇಲೆ ಬೊಗಸೆಗಣನ್ನನ್ನು ಅರಳಿಸುತ್ತಾ. ಅಲ್ಲೆಲ್ಲೂ ಅಣಬೆಗಳು ಹಿಡಿಮಳೆಗೆ ಭೂಮಿ ನೆನೆಯುವದನ್ನು ತಪ್ಪಿಸಲು ಕ್ಷಣಮಾತ್ರದಲ್ಲಿ ಹೂವಾಗಿ ಅರಳಿ ನಿಲ್ಲುತ್ತವೆ ಹಬ್ಬದ ಛತ್ರಿ ಚಾಮರ ಕಂಡಂತೆ. ಪುಟುಪುಟು ನೆಗೆಯುತ್ತಾ ಓಡಾಡುವ ಕಪ್ಪೆಮರಿಗಳ ಆಟ ಪುಟ್‍ಬಾಲ್ ಆಟ ನೋಡುವಷ್ಟೇ ಮಜಭೂತವಾಗಿರುತ್ತದೆ. ದೇವರ ಆಟ ಬಲ್ಲವರ್ಯಾರು? ಹಸಿದು ಬರಗೆಟ್ಟ ಗಿಡಗಳು ಹಸಿರಾಗಲೂ ಜಡಿಮಳೆ ಬಸಿರಾಗುವಂತೆ ಮಾಡುತ್ತದೆ. ಎಲೆಯುದರಿ ಮುದುಡಿಕೊಂಡ ಗಿಡಗಳು ಮೆಲ್ಲನೆ ಮೈ ಕೊಡವಿಕೊಂಡು ಹಣ್ಣಾದ ಹಳದಿ ಎಲೆಗಳನ್ನು ಉದುರಿಸಿ ಚಿಗುರೆಲೆಗೆ ಜಾಗ ಮಾಡಿಕೊಡುತ್ತದೆ. ಮೆಲ್ಲಗೆ ಹೂವೊಂದು ಗರ್ಭದಿಂದ ಹೊರಬಂದು ನಗುತ್ತಾ ನಾಚಿ ನೀರಾಗುತ್ತದೆ ದುಂಬಿ ಬಂದು ಕುಳಿತಾಗ. ಕೊಟ್ಟಿಗೆಯಲ್ಲಿ ಧೂಳು ಬಡ

ಚಂದಿರನಲ್ಲದೇ ನಿನಗೇನು ಕೊಡಲಿ ನಾನು..!

ಅವಳು, ಆಕೆ ಬಳಕಿದರೆ ಬಾತುಕೋಳಿಯ ಮೈಯವಳು, ದುಂಡುಮುಖ, ಗಿಣಿಯನ್ನು ನಾಚಿಸುವ ಮೂಗು, ಗಾಳಿ ಬೆಳಕನ್ನುಂಡು ಉಬ್ಬಿಕೊಂಡ ಗಲ್ಲಗಳು, ಅರಳಿ ನಿಶ್ಚಲವಾಗಿ ಕಾಡಿಸುವ ಮುಗ್ಧ ಕಣ್ಣುಗಳು, ಅಲ್ಲಲಿ ಇಳಿಬಿದ್ದಿರುವ ಮುಂಗುರುಳಿನವಳು, ಹೃದಯಕ್ಕೆ ಬೆಂಕಿ ಹಚ್ಚಿ ಮಾಯವಾಗುವ ಪ್ರೇಮಲೋಕದ ರಾಜಕುಮಾರಿಯಂತವಳು, ಬರಗಾಲ ಬಿದ್ದ ನೆಲಕ್ಕೆ ತಂಪೆರೆಯುವ ಮಳೆ ಸುರಿದವಳು, ಮಿನಾಕ್ಷೀ ಚೌಕ್‍ನ ಪ್ರತಿಯೊಂದು ಕಲ್ಲುಕಲ್ಲಿನಲ್ಲಿಯೂ ಕಾಣಿಸಿದವಳು, ಕಾಡಿಸಿದವಳು, ಹೃದಯಕ್ಕೆ ತೂತು ಕೊರೆದವಳು, ಕ್ಲಾಸ್‍ಲ್ಲಿ ಜುಮುಕಿಗಳನ್ನು ಅಲುಗಾಡಿಸುತ್ತಾ, ಕಾಲ್ಗೆಜ್ಜೆಯ ಸದ್ದುಮಾಡುತ್ತಾ ನಡೆದಾಡುವ ನವಿಲಿನಂತವಳು, ಅದಕ್ಕೂ ಮೀರಿ ಧಿಮಾಕಿನ ರಾಣಿಯ ವಂಶದವಳು. ಅವಳಿಗೆ ನಾನು ಪ್ರೀತಿಯಿಂದ ಆಂಬ್ಯುಲೆನ್ಸ್ ಎಂದು ಕರೆಯುತ್ತಿದ್ದೆ. ಅದಕ್ಕೂ ಒಂದು ಕಾರಣವಿದೆ. ಕೋಚಿಂಗ್‍ಗೆ ಬಿಜಾಪೂರಕ್ಕೆ ಬಂದಾಗ ಗೋಲಬುಂಬಜ್‍ದ ಹಾಗೆ ನನ್ನನ್ನು ಸೆಳೆದವಳು ಅವಳು. ನನ್ನ ಹೃದಯದ ಪ್ರತಿ ಕೋಣೆಯಲ್ಲಿಯೂ ಅವಳ ನೆನಪು ಪ್ರತಿದ್ವನಿಸುತ್ತಿದೆ ಒಂದಲ್ಲಾ ಎಳೇಳು ಸಾರಿ...! ಕ್ಲಾಸ್‍ಲ್ಲಿ ಪ್ಯಾನಿಗಾಗಿ ನಡೆದ ಜಿದ್ದಾಟದಲ್ಲಿ ಗೆದ್ದವಳು ನೀನಲ್ಲವೇ ನನ್ನವಳು. ಅವಳ ಗೆಲ್ಲುವ ಹಠಮಾರಿತನಕ್ಕೆ ಸೋತು ಹೋದ ಹುಚ್ಚು ಪೋರ ನಾನು. ಅವಳ ಒಂದು ನಗುವಿಗಾಗಿ, ವಾರೆಗಣ್ಣಿನ ನೋಟಕ್ಕಾಗಿ, ಕೈಬೆರುಳುಗಳ ಉಂಗುರಗಳ ದರ್ಶನಕ್ಕಾಗಿ, ಇತಿಹಾಸದ ಪೀರಿಯಡ್‍ಲ್ಲಿಯೂ ವಾಕರಿಕೆ ತರುವಷ್ಟು ಭವಿಷತ್‍ಕಾಲದ ಕನಸು ಕಾಣುತ್ತಿದ್ದವನು ನ

ವಂಕ ಮೂತಿ ಹನುಮಪ್ಪನ ಸಂಕಟ

‘ದೇವ್ರೇ ನನ್ ಹುಡುಗಿ ಬಂದಾಳ, ಅವ್ಳು ನೋಡಾಕ ಸನ್ನಿಲಿಯೋಲ್ ತರಾ ಅಲ್ಲದಿದ್ರೂ ಒಂದ್ ರೆಂಜಿಗೆ ರಮ್ಯಾ, ಮಲ್ಲಿಕಾ ಶರಾವತ್ ಇದ್ದಾಂಗ ಅದಾಳಾ... ಅಕಿಗೆ ನಂಗ ಸೆಟ್ ಮಾಡಿದ್ರ ನಿಂಗ ಒಂದು ಕಾಯಿ ಒಡೀತೀನಿ’ ಅಂತ ಹುಡುಗನೊಬ್ಬ ಶನಿವಾರದ ಸಾಯಂಕಾಲದ ಸಮಯದಲ್ಲಿ ಒಂದೇ ಉಸುರಿಗೆ ಬೇಡಿಕೊಂಡ. ಆ ದೇವರು ಬ್ಯಾರೆ ಯಾರು ಅಲ್ಲ. ವಾಮನಪುತ್ರ, ರಾಮನಭಕ್ತ, ಗುಡ್ಡವನೇತ್ತಿದ ಆಂಜನೇಯ, ಬ್ರಹ್ಮಾಂಡದಲ್ಲಿ ಮೊದಲಬಾರಿಗೆ ಸಿಕ್ಸ್‍ಪ್ಯಾಕ ಮಾಡಿಕೊಂಡ ಹನುಮಂತ, ನನ್ ಪಾಲಿಗೆ ವಂಕ ಮೂತಿ ಹನುಮ್ಯಾ..! ವಂಕ ಮೂತಿ ಹನುಮ್ಯಾ ಮೊದಲಾ ಬ್ರಹ್ಮಚಾರಿ. ಅವನಿಗೆ ಹುಡುಗಿ ಸಿಗಲಾರದೆ ಮೂತಿ ಸಿಂಡರಿಸಿಕೊಂಡು ನಿಂತಲ್ಲೇ ನಿಂತು ಕಾಲು ನೊಯಿದರೂ ಪರವಾಗಿಲ್ಲ ಜಗವ ರಕ್ಷಿಸೋ ಪಣ ತೊಟ್ಟಿದ್ದಾನೆ. ಅಂತವನ ಎದುರು ಈ ಹುಡುಗಾ ಹುಡುಗಿ ಕೊಡು ಎಂದು ಎಟಿಎಮ್ ಮುಂದೆ ಡ್ರಾ ಮಾಡಿಕೋಳ್ಳುವ ರೀತಿ ಬೇಡ್ತಾ ಇದ್ದರೆ ಆ ದ್ಯಾವ್ರಿಗೆ ಹೊಟ್ಟ್ಯಾಗ ಖಾರ ಕಲಸಿದಂಗ ಆಗಲಾರದೆ ಇರಲಾರದು. ಅದರಾಗ ಬ್ಯಾರೆ ಈ ಹುಡುಗ್ಯಾರು ನೀಲಿ,ಹಳದಿ,ಕೆಂಪು ಜಗಮಗಿಸೋ ಬಟ್ಟಿ ಹಾಕ್ಕೊಂಡು, ಇಡೀ ಊರಿಗೆ ಪುಗಸೆಟ್ಟೆ ಸೆಂಟ್ ವಾಸನೆ ಬಡಿಸುತ್ತಾ, ಮಲ್ಲಿಗೆ, ರೋಜ್, ಸೇವಂತಿ ಇತ್ಯಾದಿ ಮುಡಿದುಕೊಂಡು ಹನುಮಪ್ಪನ ಗುಡಿಗೆ ಬಂದ್ರ ಆ ದೇವರಿಗೆ ಟೆಂಪರೇಚರ್ ಬಂದು ಜ್ವರಾಗೀರಾ ಬರಾಂಗಿಲೇನು ಅನ್ನುವದು ನನ್ನ ಬಹುದೊಡ್ಡ ಬಿಡಿಸಲಾರದ ಗಣಿತ ಯಕ್ಷಪ್ರಶ್ನೆಯಾಗಿದೆ. ಅವನಿಗೂ ಆಸೆ ಇರುತಲ್ವಾ..? ನನಗೂ ಸಂಸಾರ ಮಾಡೋಕೇ ಅಲ್ಲದಿದ್ದರೂ,

ಚಡ್ಡಿದೋಸ್ತ್ ಚಂದಪ್ಪನ ದರುಶನ..!

ಹುಣ್ಣಿಮೆಯ ರಾತ್ರಿಯಲ್ಲಿ ಒಂಟಿಯಾಗಿ ನಡೆಯುತ್ತಿರುವಾಗ ನನಗೆ ಗೊತ್ತಿಲ್ಲದೆ ನನ್ನನ್ನು ಹಿಂಬಾಲಿಸಿ ಬರುತಿದ್ದ ಚಂದಪ್ಪ ನನ್ನ ಚಡ್ಡಿದೋಸ್ತ್ ಆಗಿ ಬಹಳ ವರ್ಷವೇ ಆಗಿದೆ. ಅಜ್ಜಿ ಹೇಳುತ್ತಿದ್ದ ಮೊಲ ಮತ್ತು ಚಂದಪ್ಪನ ಕಥೆ ನನ್ನೆದೆಯೊಳಗೆ ಅಚ್ಚಾಗಿ ಉಳಿದು ತುಕ್ಕು ಹಿಡಿಯುವ ಸ್ಟೇಜ್‍ಗೆ ಬಂದು ನಿಂತಿದೆ. ಹೇಗಾದರೂ ಸರಿಯೇ ಮೊಲ ಜಿಗಿದಾಡುವದನ್ನು ನೋಡಲೇಬೇಕು ಎಂಬ ತವಕದಿಂದ ಅನೇಕ ಹುಣ್ಣಿಮೆಗಳನ್ನು ಮಾಳಿಗೆಯ ಮೇಲೆ ಆಚರಿಸಿದ್ದೆನೆ. ಚಳಿಯಲ್ಲಿ ನಡುಗಿ ಹಿಪ್ಪೆಯಾಗಿ ಹೋದರು ಮೊಲ ಮಾತ್ರ ಕದಲದೆ ‘ಸ್ಟಾಚು’ ತರ ಸ್ಟಿಲ್ ಆಗಿರತಿತ್ತು. ಶಾಲೆಯಲ್ಲಿ ಮಾಸ್ತಾರ ಪಾಠ ಮಾಡುವಾಗ ಚಂದಪ್ಪನ ಮೇಲೆ ಮಾನವ ಕಾಲಿಟ್ಟ ಚಿತ್ರವನ್ನು ತೋರಿಸಿ ವಿವಿರಿಸುತಿದ್ದಾಗ ನನಗೆ ಆ ಬೂಟುಗಾಲು ಬಲಗಾಲಿನದೋ ಎಡಗಾಲಿನದೂ ಎನ್ನುವ ಪ್ರಶ್ನೆ ಉದ್ಭವಿಸಿ ಕೇಳಿದಾಗ ಆಕಡೆಯಿಂದ ಬಂದ ಕೈ ನನ್ನ ಮುಸುಡಿಯನ್ನು ಕೆಂಪಗಾಗಿಸಿ ದಪ್ಪಮಾಡಿಬಿಟ್ಟಿತು. ಪುಸ್ತಕದಲ್ಲಿ ಆತನ ನಾನಾ ಬಗೆಯ ಚಿತ್ರಗಳನ್ನು ನೋಡುತ್ತಾ, ಅಜ್ಜಿಯ ಕಥೆಗಳಿಂದ ಪ್ರೇರಣೆಯಾಗಿ, ಮಾಯಾಲೋಕದ ಕಿನ್ನರಿಗಳ ಆಟದ ಅಂಗಳವಾಗಿರುವ ಚಂದಪ್ಪನನ್ನು ಆತನ ಬೆನ್ನು, ಕೈ, ಕಾಲುಗಳನ್ನು ಸೂಕ್ಷ್ಮವಾಗಿ ನೋಡಬೇಕು ಎನ್ನುವ ಕೂತುಹಲ ನನ್ನನ್ನು ಅನೇಕ ಸಲ ಜೀವ ಹಿಂಡಿಸುತಿತ್ತು. ಚಂದಪ್ಪ ಕೆಲವೊಬ್ಬರಿಗೆ ಪ್ರೀತಿಯ ಗೆಳೆಯ, ಕೆಲವರಿಗೆ ಒಲುಮೆಯ ಪ್ರಿಯತಮ, ಚಿಕ್ಕ ಮಕ್ಕಳಿಗೆ ಪ್ರೀತಿಯ ಚಂದಮಾಮ, ತಾಯಿಂದಿರಿಗೆ ಮಕ್ಕಳನ್ನು ಉಣಿಸಲು ಇರುವ ಸಾಧನ, ವ

ಸೂರ್ಯಪುತ್ರರ ನೋವಿಗೆ ಇಲ್ಲಿದೆ ಪರಿಹಾರ

ಹರೆಯದ ವಯಸಲ್ಲಿ ಬೇಗನೆ ಏಳುವದು ಕಷ್ಟಕಣ್ರೀ. ಗಲ್ಲಿಗೇರಿಸುವ ಶಿಕ್ಷೆಯಾದ್ರೂ ಕೊಡಿ ಬೆಳಗ್ಗಿನ ಜಾವದಲ್ಲಿ ಏಳುವ ಕೆಲಸ ಹಚ್ಚಬೇಡಿ. ರಾತ್ರಿ ಮೂರರವರೆಗೆ ಸಿನಿಮಾ, ಮೇಸೆಜು, ವಾಟ್ಸಾಪ್ ಅಂತ ಟೈಮ್‍ತಿಂದು ಮುಸುಕು ಹೊದ್ದು ಮಲಗಿದಾಗ ಜಗದ ಪರಿವೆ ಇಲ್ಲದೆ ಲೋಕದ ಯಾವುದೇ ಚಿಂತೆ ಇಲ್ಲದವರಂಥೇ ನಿದ್ದೆ ಆವರಿಸಿರುತ್ತದೆ. ಬೆಳಗ್ಗೆ ಯಾರಾದ್ರೂ ಮುಸುಕು ಹೊದ್ದು ಮಲಗಿದವನನ್ನು  ಎಚ್ಚರಿಸಿದಾಗ ಎದುರಿನವರ ಕೆನ್ನೆಯ ಮೇಲೆ ಬಿಟ್ಟಿಯಾಗಿ ಬಾಸುಂಡೆ ಮೂಡಿಸುವಷ್ಟು ಸಿಟ್ಟು ಬರುತ್ತದೆ. ಅಲ್ರೀ ನೀವೆ ಹೇಳ್ರೀ... ಬೆಳಗ್ಗಿನ ಜಾವದಲ್ಲಿ ದೀಪಿಕಾ ಪಡುಕೋಣೆ ನಮ್ಮ ಜೊತೆ “ಚಾಟ್‍ಮಸಾಲ” ತಿನ್ನುವಾಗ ಯಾರಾದ್ರೂ ಡಿಸ್ಟರ್ಬ್ ಮಾಡಿದರೆ ನಿಮಗೂ ಸಿಟ್ಟು ಬರಲ್ವಾ..? ತಿಳಿನೀಲಿ ಕಂಗಳ ಹುಡುಗಿಯ ನೆನೆದು ಪೋಲಿ ಕನಸು ಕಾಣುತ್ತಾ ಅವಳ ಹತ್ತಿರ ಹೋಗಿ ಮುತ್ತನ್ನು ಕೊಡುವ ಸಮಯದಲ್ಲಿ ಮೈ ಮೇಲೆ ತಣ್ಣಿರು ಸುರಿದರೆ ಎಬ್ಬಿಸಿದವರನ್ನು ಜಾಡಿಸಿ ಒದೆಯುವಷ್ಟು ಸಿಟ್ಟು ಬರಲ್ವಾ..? ಬೆಳಗ್ಗೆ ಬೇಗ ಎದ್ದು ವ್ಯಾಯಾಮ ಮಾಡಿದ್ರೆ ಪರ್ಸನಾಲಿಟಿ ಚನ್ನಾಗಿ ಇರುತ್ತೆ ಅಂತ ಅದೇಷ್ಟೂ ಜನ ನಂಗೆ ತಲೆತಿನ್ನುತ್ತಿದ್ದರು. ನಾನೇನೊ ಜಾಂಗಿಗ್ ಮಾಡಲು ಆಸೆ. ಆದ್ರೆ ತಕರಾರು ಇರೋದು ನಸುಕಿನ ಜಾವ 5 ಗಂಟೆಗೆ ಏಳೋದು. ಸ್ವಾಮಿ ವಿವೇಕಾನಂದರು ನಮ್ಮಂತ ಸೂರ್ಯಪುತ್ರರಿಗೆ ದೇಶವನ್ನು ಮುನ್ನಡೆಯುವದಕ್ಕೊಸ್ಕರ  “ಏಳಿ ಎದ್ದೇಳಿ’ ಅಂತ ಸಿಂಹಘರ್ಜನೆ ಮಾಡಿದ್ದಾರೆ. ಎಷ್ಟು ಗಂಟೆಗೆ ಏಳಬೇಕು ಎಂದು ಹೇಳಿಲ್ಲ

ಜನರಲ್ ಬೋಗಿಯಂಬ ವೈವಿಧ್ಯಮಯ ತಾಣ...

‘ಯುವರ್ ಅಟೇಕ್ಷನ್ ಪ್ಲೀಸ್ ಹುಬ್ಬಳ್ಳಿ ಟೂ ಸೋಲಾಪೂರ ಪ್ಯಾಸೆಂಜರ್ ಟ್ರೇನ್ ಅರೈವಲ್” ಗಾನ ಮೊಳಗಿಸುತ್ತಾ ಮೈಕ್ ಎಚ್ಚರಿಸುತ್ತಿದ್ದಂತೆ ತಮ್ಮ ತಮ್ಮ ಬ್ಯಾಗ್‍ಗಳನ್ನು ಎತ್ತಿಕೊಂಡು, ಮಕ್ಕಳ ಕೈ ಹಿಡಿದು, ಜೊತೆ ಬಂದವರಿಗೆ ಗುಡ್ ಬೈ ಹೇಳಿ ಬೋಗಿಯೊಳಗೆ ಕಾಲಿಡುವ ಮಂದಿ ಇರುವೆಗಳು ಸಕ್ಕರೆಗೆ ಮುತ್ತಿಕ್ಕುವಂತೆ ಕಾಣುತ್ತದೆ. ಕೆಲಸದ ಬೇರೆ ಊರಿಗೆ ತೆರಳುವವರು, ಅಪ್ಪಅಮ್ಮನನ್ನು ಕಾಣಲು ತೆರಳುವವು, ಹೆಂಡತಿಯ ಊರಿಗೆ, ಸ್ನೇಹಿತರ ಮಧುವೆ ಮುಂಜಿಗೆ, ಇಲ್ಲಾ ಸಂಬಂಧಗಳನ್ನು ಕಡಿದುಕೊಂಡು ಪರವೂರಿನಲ್ಲಿ ನೆಲೆ ಕಾಣಲು, ಹಲವಾರು ಕಾರಣಗಳನ್ನು ಇಟ್ಟುಕೊಂಡು ಬಂದ ಪ್ರಯಾಣಿಕರು ಸೀಟು ಹಿಡಿಯುವ ಧಾವಂತದಲ್ಲಿ ಇದ್ದರೆ ಕಂಕಳಲ್ಲಿ ಕುಳಿತ ಮಗು ಬೆರಗುಗಣ್ಣಿನಿಂದ ಕಿಟಕಿಯತ್ತ ಕಣ್ಣು ಹಾಯಿಸುತ್ತದೆ. ಜಾತೀಗೀತಿಯ ಬಂಧನವನ್ನು ಕಾಣದ ಏಕೈಕ ಸ್ಥಳವೆಂದರೆ ಅದು ರೈಲು ಬೋಗಿ. ಪಕ್ಕದವನ ಜಾತಿಯನ್ನು ಕೇಳದೆ ಮೈ ಅಂಟಿಸಿಕೊಂಡು ನಿಟ್ಟುಸಿರು ಬಿಡುತ್ತಾ ತಮ್ಮದೆ ಯೋಚನಾ ಲಹರಿಯಲ್ಲಿ ಮುಳುಗಿ ಬಟ್ಟೆಗಳನ್ನು ಸರಿಮಾಡಿಕೊಳ್ಳುತ್ತಾರೆ. ಸುತ್ತಲು ಒಮ್ಮೆ ಕಣ್ಣು ಹಾಯಿಸಿದರೆ ಸೂಟುಬೂಟು ಹಾಕಿಕೊಂಡ ಶ್ರೀಮಂತ, ದೊಗಳೆ ಅಂಗಿ ಧರಿಸಿದ ಮದ್ಯಮ ಕುಟುಂಬ ವ್ಯಕ್ತಿ, ಧೊತರಕ್ಕೆ ನೀಲಿಬಳಿದುಕೊಂಡ ಹಳ್ಳಯ ಹಿರಿಯ, ದಾಡಿ ಬಿಟ್ಟ ಮುಲ್ಲಾ, ಆಗ ತಾನೆ ಮಧುವೆಯಾದ ಜೋಡಿಗಳು, ಹಳ್ಳಿ ಹೆಂಗಸರು, ಚಿಕ್ಕಮಕ್ಕಳು, ಅಷ್ಟೆ ಅಲ್ಲದೆ ಬಿಸ್ಕಿಟ್ ಮಾರುವವವರು, ಬಿಕ್ಷುಕರು, ಚಪ್ಪಾಳೆ ತಟ್ಟುವ ಮಂಗಳಮು

ಸಂಬಂಧ ಬೇರೂರುವ ಮುನ್ನ

ಒಂದೇ ಗರ್ಭದಲ್ಲಿ ಮೊಳಕೆಯೊಡೆದವರಲ್ಲ, ಕೂಡಿಬೆಳೆದವರಲ್ಲ, ಒಬ್ಬರಿಗೊಬ್ಬರು ಪರಿಚಯವಿಲ್ಲ. ಆದರೆ ಕಾಣದೆ ಇರುವ ವಿಧಿಯ ಹೆಸರಿನಲ್ಲಿ ಪರಸ್ಪರ ಸಂಧಿಸುವ ಮಾಗಿಯ ಕಾಲ ಬರುತ್ತದೆ. ಅವರ್ಯಾರೋ? ಇವರ್ಯಾರೋ? ಆಸೆಗಳು ವಿಭಿನ್ನ, ಗುರಿಯಂತೂ ಉತ್ತರಾಯಣ ದಕ್ಷಿಣಾಯನ. ನಸುನಗುವಿನಿಂದ ಕಸಿ ಕಟ್ಟುವ ಸ್ನೇಹ ಹೃದಯದಲ್ಲಿ ಬೇರನ್ನು ಬಿಟ್ಟು ಸಾಯುವವರೆಗೂ ನೆನಪಿನ ಫಲ ನೀಡುತ್ತದೆ. ಸತ್ತರೂ ಅದು ಅಮರವಾಗಿ ನಮ್ಮ ಆತ್ಮೀಯರ ಬಾಯಲ್ಲಿ ಪದವಾಗಿ ಹೊಮ್ಮುತ್ತದೆ. ಒಂದು ಸಣ್ಣ ಖುಷಿಗಾಗಿ ಗುಟುಕಿಸಿದ ಶುಗರ್‍ಲೆಸ್ ಟಿ ನಮ್ಮ ಬಾಳಿನ ತುಂಬಾ ಸಿಹಿಸಕ್ಕರೆಯಂತಾ ಅನುಭವವನ್ನು ತಂದೊಡ್ಡುತ್ತದೆ. ಗೆಳತನಕ್ಕೆ ಗಂಟು ಬಿದ್ದಾಗ ಹಸಿಮನಸ್ಸು ಅಂಟಿಕೊಂಡು ಮನೆಯವರ ನೆನಪು ಮರೆಯುವಂತೆ ಕುಳಿತ ಕಲ್ಲಿನಬೆಂಚಿಗೂ ಬೇಸರವಾಗುವಂತೆ ಅಲ್ಲಿ ಲೋಕಾಭಿರಾಮದ ಮಾತು ತುಂಬಾ ಅಪಾಯ್ಯಮಾನವಾಗಿರುತ್ತದೆ. ಅಲ್ಲಿ ಆಡಿದ ಮಾತು, ಮಾಡಿದ ಜಗಳ, ಬೇಸರವಾದಾಗ ನೆನಪಿನ ಅಂಗಳಕ್ಕೆ ತಂದಾಗ ತುಟಿಗಳು ತನ್ನಷ್ಟಕ್ಕಕ್ಕೆ ತಾನೇ ನಸುನಗುತ್ತವೆ. ತಪ್ಪಲ್ಲದ ತಪ್ಪಿಗೆ ಕಾಲು ಕೆರೆದುಕೊಂಡು ಮಗುವಿನಂತೆ ರಚ್ಚೆ ಹಿಡಿದು ಹುಸಿಮುನಿಸು ತೋರುವ ಮುಖದಲ್ಲಿ ಯಾವ ಲಜ್ಜೆಯೂ ಇಲ್ಲದೆ ಪುಟ್ಟ ಮಗುವಿನಂತೆ ನಗುವೊಂದು ಪುಟಿಯುತ್ತದೆ ಮೆಲ್ಲಗೆ. ಹಗಲುರಾತ್ರಿಯೆಲ್ಲಾ ಮೇಸೆಜ್ ಮೂಲಕ ತಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳುತ್ತಾ, ಆಪ್ತರಾಗುವ ಕ್ರಿಯೆ ನೋಡನೋಡವಷ್ಟರಲ್ಲಿ ಗಾಡವಾದ ಸಂಬಂಧ ಬೆಳದು ಆಲದಮರದ ಬಿಳಲಿನಂತೆ ವಿ

ಏಕಾಂಗಿಯೊಬ್ಬನ ದಾರಿಯ ಕವಲುಗಳು...

ಇಷ್ಟೂ ದೂರ ಸಾಗಿ ಬಂದರೂ ನಾನು ಇನ್ನು ಗುರಿ ಮುಟ್ಟೆ ಇಲ್ಲ ಎಂಬ ಕಠೋರ ಸತ್ಯ ಅರಿವಿಗೆ ಬರುವದು ಒಮ್ಮೆ ಕತ್ತು ತಿರುಗಿಸಿ ಹಿಂದೆ ನೋಡಿದಾಗ. ನಾವು ಅಂದುಕೊಂಡ ಕನಸು, ನಾವು ಕಟ್ಟಿಕೊಂಡ ಗುರಿಯನ್ನು ತಲುಪುವ ಹಾದಿಯಲ್ಲಿ ನೂರೆಂಟು ಕವಲುಗಳು, ತಗ್ಗುದಿನ್ನೆಗಳು ಹೆಡೆ ಬಿಚ್ಚಿ ಸ್ವಾಗತಿಸುತ್ತವೆ. ನಮ್ಮ ಮನಸಿನ ನಿರ್ಧಾರವನ್ನು ಕೇಳದೆ ಬೇರೆ ಯಾರದೋ ಮಾತಿಗೆ ನಮ್ಮ ಕನಸನ್ನು ಚಿವುಟಿ ಮತ್ತೊಬ್ಬರ ಕನಸಿಗೆ ಜೀತದಾಳಾಗಿ ದುಡಿಯುವ ಪರಿ ದಿಕ್ಕು ದೆಸೆಯಿಲ್ಲದೆ ಸುತ್ತುವ ದಿಕ್ಸೂಚಿಯಿಲ್ಲದ ಹಡಗಿನಂತಾಗುತ್ತದೆ. ನಾನು ಹೊಗುವ ದಾರಿ ನನಗೆ ಮಾತ್ರ ಸ್ಪಷ್ಟವಾಗಿ ಕಾಣುತ್ತದೆ ಹೊರತು ಬೇರೆ ಯಾರಿಗೂ ಅಲ್ಲ. ಅದು ಎಂದಿಗೂ ಕವಲೊಡೆದು ಅಪರಿಚಿತ ಊರಿಗೆ ಹೋಗುವದಿಲ್ಲ. ಅಂದುಕೊಂಡ ಗೂಡಿಗೆ ನಮ್ಮನ್ನು ಕರೆದೊಯ್ಯುತ್ತದೆ. ಅಲ್ಲಿ ನಮಗಾಗಿ ಸುಖ ಸಂತೋಷದ ನಿಧಿ ಕಾದು ಕೂತಿರುತ್ತದೆ. ನಾನು ಸಾಗುವ ಹಾದಿಯಲ್ಲಿ ಮುಳ್ಳಿದೆ ಅಂತ ಗೊತ್ತಿದ್ದರೂ ಅದು ನನಗೆ ಅಚ್ಚುಮೆಚ್ಚಿನ ಹಾದಿಯಾಗಿರುತ್ತದೆ. ಅಲ್ಲಿ ನನಗಾಗಿ ಹೂವು ಹಾಸಿಗೆ ಹಾಸಿರುತ್ತದೆ. ತಂಪು ತಂಗಾಳಿಯ ಜೊತೆ ನೆರಳು ನೀಡುತ್ತದೆ. ಅದಕ್ಕೆ ನಾನು ಮಾಡಬೇಕಾದದ್ದು ಇಷ್ಟೇ, ನನಗಾಗಿ ನಾನು ಬದುಕುವದು. ಇದು ಒಂತರಾ ಸ್ವಾರ್ಥ ಎನಿಸಿದರೂ ಪರರಿಗೋಸ್ಕರ ದಿನಗಟ್ಟಲೆ ವ್ಯಯಿಸುವ ನಾನು ನನಗೋಸ್ಕರ ಒಂದಷ್ಟು ಸಮಯ ಕೊಡುವದರಲ್ಲಿ ಏನು ತಪ್ಪಿದೆ..? ಅದೇ ಸಂತೆಯ ಪರಿಚಿತವಿರುವ ಮಂದಿಯ ನಡುವೆ ನಮ್ಮ ದಾರಿ ಸಿಕ್ಕು ದಿಕ್ಕಾಪಾಲಾಗಿ ದಡ

ಮಸ್ತಕಕ್ಕಿಳಿಯುವ ಪುಸ್ತಕದ ಆಲಯದೊಳಗೆ...

ಗ್ರಂಥಾಲಯ ಜೀವಂತ ದೇವಾಲಯ ಎನ್ನುವ ಬೋರ್ಡಿನ ಕೆಳಗೆ ಪ್ರವೇಶಿಸಿದಾಗ ಆಳೆತ್ತರ ಏಳೆಂಟು ಕಪಾಟುಗಳು ಕಣ್ಣಿಗೆ ಬೀಳುತ್ತವೆ. ನೀಟಾಗಿ ಪುಸ್ತಕಗಳನ್ನು ಜೋಡಿಸುವದೆಂದರೆ ಓದುಗರಿಗೆ ಅದೆಷ್ಟೂ ಹಿಂಸೆನೋ..? ಅಡ್ಡಾದಿಡ್ಡಿಯಾಗಿ ಕಾಲುಜಾರಿ ಬಿದ್ದ ಪುಸ್ತಕಗಳ ಸಾಲಿನಲ್ಲಿ ಇಷ್ಟವಾದದನ್ನು ಹುಡುಕುವಾಗ ಧೂಳು ಮೂಗಿನ ಹೊಳ್ಳೆಯೊಳಗೆ ಲಬಕ್ಕೆನೆ ಹೊಕ್ಕೆ ಗಬಕ್ಕನೇ ಸೀನುವಂತೆ ಮಾಡುತ್ತದೆ. ಕತೆಯ ಪುಸ್ತಕ ಎಂದು ಬರೆದ ರ್ಯಾಕ್‍ನಲ್ಲಿ ಹಳೆಯ ಕಾದಂಬರಿಗಳ ರಾಶಿ ಇರುತ್ತದೆ. ವಿಜ್ಞಾನ ಎಂದ ಕಡೆ ಕವನ ಸಂಕಲನದ ಗುಚ್ಛಗಳು ಓದಲು ಮೈ ತೆರೆದುಕೊಂಡು ನಿಂತಿರುತ್ತವೆ. ರಟ್ಟು ಹರಿದು ಹೋಗಿ ಹೆಸರು ಮರೆತ ಅನಾಥ ಬುಕ್ಕುಗಳೂ ಆಶಾಭಾವನೆ ಹೊತ್ತುಕೊಂಡು ಬದುಕುತ್ತಿರುತ್ತವೆ. ಯಾರೋ ಬರೆದ ಅನುಭವದ ಸಾಲುಗಳು ಮತ್ಯಾರಿಗೋ ಇಷ್ಟವಾಗಿ ಹಸಿರು,ಕೆಂಪು ಪೆನ್ನಿನ ಮಾರ್ಕುಗಳನ್ನು ಅಂಟಿಸಿಕೊಂಡು ಫೋಕಸ್ ಆಗುತ್ತವೆ. ಮತ್ತೇ ಅಲ್ಲಲ್ಲಿ ಟೀಕೆ-ಟಿಪ್ಪಣಿಯ ವಿಮರ್ಶೆ ಕೂಡಾ ಇರುತ್ತದೆ. ಪ್ರೇಮಗವನಕ್ಕೆ ಹುಡುಗಿಯ ಇಂಗ್ಲೀಷ್ ಕ್ಯಾಪಿಟಲ್ ಲೆಟರ್‍ನ್ನು ದೊಡ್ಡಾದಾಗಿ ಬಿಡಿಸಿ ಕನಸುಗಳಿಗೆ ಜಾರಿಹೋಗುವ ಸಂಭವವೂ ಸಾಕಷ್ಟು ಪುಸ್ತಕದಲ್ಲಿ ಗೋಚರವಾಗುತ್ತವೆ. ರೋಚಕವಾಗಿ ಓದಿಸಿಕೊಳ್ಳುತ್ತಾ ಸಾಗುವ ಕಾದಂಬರಿ ಇನ್ನೇನು ಕ್ಮೈಮ್ಯಾಕ್ಸ್ ಸ್ಟೋರಿಯ ಕಡೆ ಬಂದಾಗ ಯಾರೋ ಹಾಳೆ ಕಿತ್ತುಕೊಂಡು ಹೋಗಿರುವದನ್ನು ಕಂಡು ಸಾಂಭಾರ ಇಲ್ಲದೇಯೇ ಮಸಾಲದೋಸೆ ತಿಂದ ಅನುಭವವಾಗುತ್ತದೆ. ಹಾಳೆ ಕಿತ್ತಿದವನನ್ನು ಮನದಲ

ಎಚ್ಚರವಿರುವುದು ಕನಸುಗಳು ಮಾತ್ರ

ಝಗಮಗಿಸುವ ರಂಗಮಂಚದಲ್ಲಿ ಬಣ್ಣ ಬಣ್ಣದ ವೇಷಭೂಷಣಗಳ ಝಲಕ್ಕು ಕಣ್ಣು ಕುಕ್ಕಿಸುತ್ತದೆ. ಮಾತಿಗೊಮ್ಮೆ ಶಹ್ಬಾಶ್ ಹೇಳುತ್ತಿದ್ದ ತುಟಿ ನಾಟಕ ಮುಗಿದ ಮೇಲೆ ಇದ್ದಕ್ಕಿದಂತೆ ತಟಟ್ಥವಾಗಿ ಬಿಡುತ್ತದೆ. ಮನದಾಳದಲ್ಲಿ ಹಾದು ಹೋದ ಪಾತ್ರಗಳ ನಿಜ ಕಲ್ಪನಾ ಲೋಕ ಮರೆಯಾಗಿ ವಾಸ್ತವದ ಆದಿಮಪ್ರಜ್ಞೆಗೆ ಮನಸ್ಸು ಬಂದಿಳಿಯುತ್ತದೆ. ಚಪ್ಪಾಳೆಯ ಕರಾಡತನ ಮುಗಿದ ಮೇಲೆ ಪಾತ್ರಧಾರಿಗಳ ನಿರ್ಗಮನದ ಜೊತೆ ಪ್ರೇಕ್ಷಕರು ನಡೆಯುತ್ತಾರೆ ಜೀವನ ಎಂಬ ನಾಟಕ ಆಡಲು. ರಂಗಮಂದಿರ ಮಾತ್ರ ತಾನು ಇದ್ದಲ್ಲಿಯೇ ಇರುತ್ತದೆ ಯಾವ ಮುಖಭಾವ ಬದಲಿಸದೆ. ಅದೇ ಹಳೆಯ ಗೋಡೆ, ಸೂರ್ಯನ ಬೆಳಕನ್ನು ತಡವದೇ ಭೂಮಿಗೆ ತಲುಪಿಸಿವ ಛಾವಣಿ, ತುಕ್ಕು ಹಿಡಿದ ಕಬ್ಬಿಣದ ಕುರ್ಚಿಗಳು, ಮುಂದಿನ ನಾಟಕದ ಫಲಕ, ಹಿಂದಿನ ನಾಟಕದ ಟೀಕೇಟು, ಯಾರೋ ಸೇದಿ ಎಸೆದ ಗಣೇಶ ಬಿಡಿ, ಉಗುಳಿದ ಪಾನ್‍ಮಸಾಲ, ಬಸ್‍ಟಿಕೆಟ್, ತಿಂದು ಬಿಸಾಡಿದ ಕರ್ರುಂಕುರ್ರುಂ ಕುರುಕುರೆ ಬ್ಯಾಗಡಿ ಚೀಲ, ಮತ್ತೇ ಅನಾಥವಾಗಿ ಬಿದ್ದಿರುವ ಒಂದು ಒಂಟಿ ಚಪ್ಪಲಿ. ಕುಣಿತದ ಭಾರಕ್ಕೆ ಸುಸ್ತಾಗಿ ರಂಗಮಂಚ ನಿದ್ರಿಸುತ್ತದೆ ನಾಳೆಯ ಕುಣಿತಕ್ಕೆ ಮೈಕೊಡಲು. ಬಣ್ಣಬಣ್ಣದ ಲೈಟ್‍ಗಳು ನೇಣಿಗೆ ಸಿಲುಕಿದಂತೆ ಕಾಣುತ್ತದೆ. ದೂರದಲ್ಲಿ ನಾಯಿ ನಾಟಕದ ಬ್ಯಾನರ್‍ಗೆ ಅಂಟಿಕೊಂಡು ಮಳೆ ಸಿಡಿಸುತ್ತಿರುತ್ತದೆ. ದೊಡ್ಡ ಹೊಟ್ಟೆಯ ಮೇಲೆ ಕೈಯಾಡಿಸುತ್ತಾ ನಾಟಕದ ಮಾಲೀಕ ಕಲೆಕ್ಷನ್ ರೂಂಗೆ ಎಂಟ್ರಿ ಕೊಡುತ್ತಾನೆ. ಸರಳುಗಳಿಂದ ಆವೃತ್ತವಾಗಿರುವ ಚಿಕ್ಕ ತಾತ್ಕಾಲಿಕ ಜೋಪಡ