ಝಗಮಗಿಸುವ ರಂಗಮಂಚದಲ್ಲಿ ಬಣ್ಣ ಬಣ್ಣದ ವೇಷಭೂಷಣಗಳ ಝಲಕ್ಕು ಕಣ್ಣು ಕುಕ್ಕಿಸುತ್ತದೆ. ಮಾತಿಗೊಮ್ಮೆ ಶಹ್ಬಾಶ್ ಹೇಳುತ್ತಿದ್ದ ತುಟಿ ನಾಟಕ ಮುಗಿದ ಮೇಲೆ ಇದ್ದಕ್ಕಿದಂತೆ ತಟಟ್ಥವಾಗಿ ಬಿಡುತ್ತದೆ. ಮನದಾಳದಲ್ಲಿ ಹಾದು ಹೋದ ಪಾತ್ರಗಳ ನಿಜ ಕಲ್ಪನಾ ಲೋಕ ಮರೆಯಾಗಿ ವಾಸ್ತವದ ಆದಿಮಪ್ರಜ್ಞೆಗೆ ಮನಸ್ಸು ಬಂದಿಳಿಯುತ್ತದೆ. ಚಪ್ಪಾಳೆಯ ಕರಾಡತನ ಮುಗಿದ ಮೇಲೆ ಪಾತ್ರಧಾರಿಗಳ ನಿರ್ಗಮನದ ಜೊತೆ ಪ್ರೇಕ್ಷಕರು ನಡೆಯುತ್ತಾರೆ ಜೀವನ ಎಂಬ ನಾಟಕ ಆಡಲು. ರಂಗಮಂದಿರ ಮಾತ್ರ ತಾನು ಇದ್ದಲ್ಲಿಯೇ ಇರುತ್ತದೆ ಯಾವ ಮುಖಭಾವ ಬದಲಿಸದೆ. ಅದೇ ಹಳೆಯ ಗೋಡೆ, ಸೂರ್ಯನ ಬೆಳಕನ್ನು ತಡವದೇ ಭೂಮಿಗೆ ತಲುಪಿಸಿವ ಛಾವಣಿ, ತುಕ್ಕು ಹಿಡಿದ ಕಬ್ಬಿಣದ ಕುರ್ಚಿಗಳು, ಮುಂದಿನ ನಾಟಕದ ಫಲಕ, ಹಿಂದಿನ ನಾಟಕದ ಟೀಕೇಟು, ಯಾರೋ ಸೇದಿ ಎಸೆದ ಗಣೇಶ ಬಿಡಿ, ಉಗುಳಿದ ಪಾನ್‍ಮಸಾಲ, ಬಸ್‍ಟಿಕೆಟ್, ತಿಂದು ಬಿಸಾಡಿದ ಕರ್ರುಂಕುರ್ರುಂ ಕುರುಕುರೆ ಬ್ಯಾಗಡಿ ಚೀಲ, ಮತ್ತೇ ಅನಾಥವಾಗಿ ಬಿದ್ದಿರುವ ಒಂದು ಒಂಟಿ ಚಪ್ಪಲಿ. ಕುಣಿತದ ಭಾರಕ್ಕೆ ಸುಸ್ತಾಗಿ ರಂಗಮಂಚ ನಿದ್ರಿಸುತ್ತದೆ ನಾಳೆಯ ಕುಣಿತಕ್ಕೆ ಮೈಕೊಡಲು. ಬಣ್ಣಬಣ್ಣದ ಲೈಟ್‍ಗಳು ನೇಣಿಗೆ ಸಿಲುಕಿದಂತೆ ಕಾಣುತ್ತದೆ. ದೂರದಲ್ಲಿ ನಾಯಿ ನಾಟಕದ ಬ್ಯಾನರ್‍ಗೆ ಅಂಟಿಕೊಂಡು ಮಳೆ ಸಿಡಿಸುತ್ತಿರುತ್ತದೆ. ದೊಡ್ಡ ಹೊಟ್ಟೆಯ ಮೇಲೆ ಕೈಯಾಡಿಸುತ್ತಾ ನಾಟಕದ ಮಾಲೀಕ ಕಲೆಕ್ಷನ್ ರೂಂಗೆ ಎಂಟ್ರಿ ಕೊಡುತ್ತಾನೆ. ಸರಳುಗಳಿಂದ ಆವೃತ್ತವಾಗಿರುವ ಚಿಕ್ಕ ತಾತ್ಕಾಲಿಕ ಜೋಪಡ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ