‘ಕಾಲನ ಕೈಗೆ ದೇವರು ಸೃಷ್ಟಿ ಮಾಡಿದ ಜಗತ್ತು ಉಳಿಯುವದಿಲ್ಲವೆಂದ ಮೇಲೆ ನಾವು ಯಾವ ಲೆಕ್ಕ’ ಏಲ್ಲೋ ಓದಿದ ಅಣಿಮುತ್ತು ಮೊನ್ನೆ ದುತ್ತನೆ ಮೆದುಳಿನಲ್ಲಿ ಗುಂಗಿ ಹುಳದಂತೆ ಕಾಡತೊಡಗಿತು. ಕಾರಣವಿಷ್ಟೇ, ಎಮ್.ಎ ಮುಗಿಯುವ ಸಮಯವೂ ಹೌದು, ಅದಕ್ಕಿಂತ ಮುಖ್ಯವಾಗಿ “ಆನಂದಮಾರ್ಗ ಆಶ್ರಮ” ತೊರೆಯಬೇಕಲ್ಲ ಎನ್ನುವ ನೋವು. ಆ ನೋವಿಗೆ ಕಾರಣವಾದವನು ದಿನಾಲೂ ಗಟ್ಟಿ ಕೆನೆ ‘ಮೊಸರು ಮಾರುವ ಹುಡುಗ’ ಮತ್ತು ಆತನ ‘ಸೈಕಲ್’. ಆ ಹುಡುಗ 7ನೇ ತರಗತಿ. ಯಲ್ಲಪ್ಪ ಮನ್ಸೂರ. ಸುಮಾರು 3 ಕಿ.ಮಿ ಸೈಕಲ್ ತುಳಿದು ಮೊಸರು ಮಾರುವ ಕಾಯಕ ಮಾಡುತ್ತಾನೆ. ಅದಕ್ಕಿಂತ ಹೆಚ್ಚಾಗಿ ಮುಂಜಾನೆಯ ಎಳೆ ಬಿಸಿಲಿನಲ್ಲಿ ಮಲಗಿದ್ದ ಹಾಸಿಗೆ ಹೊದ್ದು ಮಲಗಿದ್ದ ನನಗೆ ಎಚ್ಚರಿಸುವ ಅಲರಾಂ ಬೆಲ್ ಎಂತಲೇ ಹೇಳಬಹುದು. ಅವನ ಸೈಕಲ್ ಮಾಯಲೋಕದ ಕಿನ್ನರರು ತಮ್ಮ ವಾಹನಗಳಿಗೆ ಶೃಂಗಾರ ಮಾಡಿದಂತೆ ಗಾಲಿಗಳಿಗೆ ರಿಬ್ಬನ್ ಸುತ್ತಿ, ಯುದ್ಧಕ್ಕೆ ಸಿದ್ಧನಾಗಿದ್ದೆನೆ ಎನ್ನುವ ರೀತಿ ಭಾವುಟ ತೋರಿಸಿ, ಗೆಂಡೆಗಳನ್ನು ಗಾಳಿಗೆ ಹಾರಾಡಿಸುತ್ತಾ ಗಂಟೆ ಬಾರಿಸುವ ಗತ್ತು ನನ್ನನ್ನು ಬಾಲ್ಯದ ಪ್ಲಾಶ್‍ಬ್ಯಾಕ್‍ಗೆ ಕರೆದೊಯ್ಯುವಂತೆ ಮಾಡಿತ್ತು. ತೂತು ಬಿದ್ದು ಪುಕ್ಸಟ್ಟೆ ಅಂಡು ಕಾಣಿಸುವ ದೊಗಳೆ ಚಡ್ಡಿ ಹಾಕಿಕೊಳ್ಳುತ್ತಿದ್ದ ವಯಸ್ಸಿನ ಹುಡುಗ ನಾನಾಗಿದ್ದೆ. ‘ಮೊದ ಮೊದಲು ಕೊಂಡ ಹೀರೋ ಸೈಕಲ್’ ಎಂಬತೆ ಪುಟ್ಟ ಸೈಕಲ್ ನಮ್ಮ ಮನೆಯ ಅಂಗಳವನ್ನು ಅಲಂಕರಿಸಿತ್ತು. ಇಡೀ ಊರಿಗೆ ಮೊದಲ ಸೈಕಲ್. ಊರಿನ ಜನ ಬಂದು ಅದನ್ನು ಮೈಸೂರ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ